8:17 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಅ. 3ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಂಗಳಾದೇವಿ ಸರ್ಕಲ್ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್

30/09/2022, 21:12

ಮಂಗಳೂರು(reporterkarnataka.com): ನಗರದ ಪ್ರಮುಖ ಭಾಗಗಳಲ್ಲಿ ನಿರ್ಮಾಣವಾದ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಹಾಗೂ ಮಂಗಳಾದೇವಿ ಸರ್ಕಲ್ ಸೋಮವಾರ ಉದ್ಘಾಟನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್  ತಿಳಿಸಿದ್ದಾರೆ.

ಈ ವಿಚಾರದಲ್ಲಿ ಮಾತನಾಡಿರುವ‌ ಶಾಸಕ ಕಾಮತ್, ಅಕ್ಟೋಬರ್ 3ನೇ ತಾರೀಕು ಸಂಜೆ 6 ಗಂಟೆಗೆ ಲೇಡಿಹಿಲ್ ಶಾಲೆಯ ಬಳಿ ನಿರ್ಮಾಣಗೊಂಡ ನೂತನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರದಲ್ಲಿ ನಿರ್ಮಾಣಗೊಂಡ ಸರ್ಕಲ್ ಹಿರಿಯರ ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಅದೇ ದಿನ ಸಂಜೆ 7 ಗಂಟೆಗೆ ಮಂಗಳಾದೇವಿ ಸರ್ಕಲ್ ಲೋಕಾರ್ಪಣೆಗೊಳ್ಳಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಶಾಸಕ ಕಾಮತ್ ಆಮಂತ್ರಿಸಿದ್ದಾರೆ. ಮಂಗಳಾದೇವಿ ವೃತ್ತವನ್ನು ಅತೀ ಸುಂದರವಾಗಿ ನಿರ್ಮಾಣ ಮಾಡಲಾಗಿದೆ. ಈ ವೃತ್ತದಲ್ಲಿ 3 ತಾಮ್ರದ ಸಿಂಹಗಳನ್ನು ಸ್ಥಾಪಿಸಲಾಗಿದೆ. ದೇವಿಯ ವಾಹನದ ಸೂಚಕವಾಗಿ ಸಿಂಹಗಳ ಚಿತ್ರಣವನ್ನು ನೀಡಲಾಗಿದೆ ಎಂದು‌ ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು