11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಮೆರವಣಿಗೆ: ಮುಖಕ್ಕೆ ಕಪ್ಪು ಮಸಿ, ಚಪ್ಪಲಿಯಿಂದ ಧರ್ಮದೇಟು

30/09/2022, 21:45

ಚೈಬಾಸಾ (reporterkarnataka.com ): ವಿದ್ಯಾರ್ಥಿನಿಯರಿಗೆ ಪಾಠದ  ವೇಳೆಯಲ್ಲಿ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರ ಮುಖಕ್ಕೆ ಕಪ್ಪು ಬಣ್ಣ ಬಳಿದು ಗ್ರಾಮಸ್ಥರು ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್‍ನ ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ನಡೆದಿದೆ.

ಶಿಕ್ಷಕನ ವರ್ತನೆಯಿಂದ ಆಕ್ರೋಶಗೊಂಡ ಮಹಿಳೆಯರು ಶಾಲೆ ಬಳಿ ಧರಣಿ ನಡೆಸಿ ಕಾಮುಕ ಶಿಕ್ಷಕನನ್ನು ಚಪ್ಪಲಿ, ಶೂಗಳಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಪಾಪಿ ಶಿಕ್ಷಕನನ್ನು ಕೂಡಲೇ ಜೈಲಿಗೆ ಕಳುಹಿಸುವಂತೆ ಒತ್ತಾಯಿಸಿದರು. ನೊಮುಂಡಿ ಬ್ಲಾಕ್‍ನ ಪ್ರಾಧಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಸುಮಾರು ಆರು ವಿದ್ಯಾರ್ಥಿನಿಯರು ತಮ್ಮ ಪೋಷಕ ಬಳಿ ಶಿಕ್ಷಕ ಅನುಚಿತವಾಗಿ ವರ್ತಿನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸಭೆ ನಡೆಸಿ ಶಿಕ್ಷಕನಿಗೆ ಶೂ,ಚಪ್ಪಲಿ ಹಾರ ಕಾಕಿ ಮೆರವಣಿಗೆ ನಡೆಸಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಸಮಾಧಾನ ಮಾಡಿದ್ದಾರೆ. ತನಿಖೆ ನಡೆಸಲಾಗುತ್ತಿದ್ದು ಶಿಕ್ಷಕನ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು