3:33 PM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಕೆರೆ ಕಾಮಗಾರಿ ಕುರಿತು ನಿರ್ಲಕ್ಷ್ಯ ತೋರದಿರಿ: ಅಧಿಕಾರಿಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಿವಿಮಾತು

01/10/2022, 12:59

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com
ಜಿಲ್ಲೆಯಲ್ಲಿ 75 ಕೆರೆಗಳ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಿ , ಅಧಿಕಾರಿಗಳು ಕೆರೆ ಕಾಮಗಾರಿಗಳ ಕುರಿತು ನಿರ್ಲಕ್ಷ್ಯ ತೊರದಿರಿ , ಕೆರೆಗೆ ನೀರು ಸುಗಮವಾಗಿ ಹರಿದು ಬರಬೇಕು , ಕೆರೆಗೆ ನೀರು ಹರಿದು ಬರದಿದ್ದರೆ ಕೆರೆ ಹೇಗೆ ತುಂಬುತ್ತದೆ , ಮುಂದಿನ ಕೆರೆಗಳಿಗೆ ಯಾವ ರೀತಿ ನೀರು ಹರಿದು ಹೋಗಲು ಸಾಧ್ಯ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದರು. 

ಅಜಾದಿ ಕಾ ಅಮೃತ ಸರೋವರ ಯೋಜನೆಯಡಿ ಕೆರೆಗಳ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಲು ಕೋಲಾರ ಜಿಲ್ಲೆಗೆ ಆಗಮಿಸಿದ್ದ ಸಚಿವರು , ಬಂಗಾರಪೇಟೆ ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಕೆರೆ , ಘಟ್ಟಕಾಮಧೇನುಹಳ್ಳಿ ಕೆರೆ , ಕೋಲಾರ ತಾಲ್ಲೂಕಿನ ಶೆಟ್ಟಿಕೊತ್ತನೂರು ಕೆರೆ ವೀಕ್ಷಿಸಿ , ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿರುವ ಕುರಿತು ತೃಪ್ತಿ ವ್ಯಕ್ತಪಡಿಸಿದರು.


ಕೋಲಾರ ಜಿಲ್ಲೆಯಾದ್ಯಂತ ಅಜಾದಿ ಕಾ ಅಮೃತ ಸರೋವರ ಯೋಜನೆಯಡಿ 75 ಕೆರೆಗಳನ್ನ ಆಯ್ಕೆ ಮಾಡಿಕೊಂಡು ಕಾಮಗಾರಿ ಪ್ರಾರಂಭಿಸಲಾಗಿದೆ , ಅನುದಾನ ಬೇಕಾದರೆ ಮತ್ತಷ್ಟು ನೀಡುವೆ ಕಾಮಗಾರಿಗಳು ಸಮಪರ್ಕ ವಾಗಿ ಆಗಬೇಕು ಎಂದು ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿ ಮುಂದೆ ಬೇಸರ ವ್ಯಕ್ತಪಡಿಸಿದರು. 

ಕೆರೆ ಅಚ್ಚುಕಟ್ಟು ನಿರ್ವಹಣೆ , ಒತ್ತುವರಿ ಕುರಿತು ಬೇಸರ ವ್ಯಕ್ತಪಡಿಸಿದ ಅವರು, ಕೆರೆಗೆ ನೀರು ಸುಗಮವಾಗಿ ಹರಿದು ಬರಬೇಕು , ಕೆರೆಗೆ ನೀರು ಹರಿದು ಬರಲು ರಸ್ತೆ ಮಾಡಬೇಕಾಗಿಲ್ಲ ಪ್ರಕೃತಿದತ್ತವಾಗಿರುವ ರಾಜಕಾಲುವೆಯ ಒತ್ತುವರಿ ತಡೆದು ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು ಎಂದರು. 

ಒಂದು ಕಡೆ ಕೊಳಚೆ ನೀರು ಹರಿಯುತ್ತಿರುವುದನ್ನು ಗಮನಿಸಿದ ಸಚಿವರು ನೀರು ಸಂಸ್ಕರಿಸಿ ಕೆರೆಗೆ ಹರಿಸಬೇಕು. ಕೆರೆಯ ಸುತ್ತಲಿನ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡುವಂತೆ ಸಲಹೆ ನೀಡಿದರು . 

ನರೇಗಾದಡಿ ಜಾನುವಾರು ಶೆಡ್ ನಿರ್ಮಿಸಿ ಕೊಡುವಂತೆ ಹಾಗೂ ಕಿಸಾನ್ ಕಾರ್ಡ್ ವಿತರಿಸುವಂತೆಯೂ ಸಚಿವೆ ನಿರ್ಮಾಲಾ ಸೀತಾರಾಮನ್ ಅಧಿಕಾರಿಗಳಿಗೆ ಸೂಚಿಸಿದರು . ರಾಜ್ಯದಲ್ಲಿ 2375 ಕೆರೆಗಳ ಅಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾ ಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಮಾಧ್ಯಮದ ಜತೆ ಮಾತನಾಡಿ , ರಾಜ್ಯಾದ್ಯಂತ 2,375 ಕೆರೆ ಅಭಿವೃದ್ಧಿ ಮಾಡಲಾಗುತ್ತಿದ್ದು , ಕೋಲಾರ ಜಿಲ್ಲೆಯಲ್ಲಿ ಒಟ್ಟು 75 ಕೆರೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ತ್ವರಿತಗತಿಯಲ್ಲಿ ನಡೆ ಯುತ್ತಿದ್ದು , ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಕೆಲವು ಕೆರೆಗಳ ಬೌಂಡರಿ ಸರಿಯಾಗಿ ಗುರುತಿಸಿಲ್ಲ ಕೆರೆಯ ಪಕ್ಕದಲ್ಲೇ ರೈತರ ಜಮೀನು ಇದೆ ಗಿಡಗಳನ್ನು ಕೆರೆಯೊಳಗೆ ನೆಡಲಾಗಿದೆ ಎಂಬ ಕೆಲ ತಪ್ಪುಗಳನ್ನು ಸಚಿವರು ಗುರುತಿಸಿದರು . ಒತ್ತುವರಿ ತೆರವುಗೊಳಿಸಿ ಕೆರೆಯ ಬೌಂಡರಿಯನ್ನು ಸರಿಯಾಗಿ ಗುರುತಿಸುವಂತೆ , ಹೂಳು ತೆಗೆಯುವಂತೆ ಸೂಚನೆ ನೀಡಿದ್ದಾರೆ ಎಂದರು. 

ಈ ಸಂದರ್ಭದಲ್ಲಿ ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ , ಮಾಜಿ ಸಚಿವ ವರ್ತೂರು ಪ್ರಕಾಶ್ , ಜಿಲ್ಲಾಧಿಕಾರಿ ವೆಂಕಟರಾಜಾ , ಎಸ್ಪಿ ಡಿ.ದೇವರಾಜ್ , ಜಿಪಂ ಸಿಇಒ ಯುಕೇಶ್‌ಕುಮಾರ್ , ಮಾಜಿ ಶಾಸಕರಾದ ಎಂ . ನಾರಾಯಣ ಸ್ವಾಮಿ , ಬಿ.ಪಿ. ವೆಂಕಟ ಮುನಿಯಪ್ಪ.ವೈ.ಸಂಪಂಗಿ , ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಮತ್ತಿತರರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು