10:45 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ  ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ 

01/10/2022, 13:46

ಮಂಗಳೂರು(reporterkarnataka.com): ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ. 

ಸೇತುವೆಯನ್ನು ಸಂಪರ್ಕಿಸುವಲ್ಲಿ ರಸ್ತೆ ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ನಾಗರಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಆಣೆಕಟ್ಟು ನಿರ್ಮಾಣದ ನಂತರ ಸಂಚಾರಿ ದೋಣಿ ನಿರ್ವಾಹಕರು ದೋಣಿ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ ಇದರಿಂದಾಗಿ ದಿನನಿತ್ಯ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ನದಿ ಆಚೆಗಿನ ಪ್ರಯಾಣಕ್ಕೆ ಸಮಸ್ಯೆ ಉಂಟಾಗಿದೆ. ಸೇತುವೆ ಮೇಲೆ ನಾಗರಿಕರಿಗೆ ನಡೆದಾಡಲು ಸಂಜೆ 7ರ ನಂತರ ಮುಂಜಾನೆ 6 ಗಂಟೆಯ ತನಕ ನಿರ್ಬಂಧ ಹೇರಿ ಸೇತುವೆಯ ಕಾಮಗಾರಿ ಪೂರ್ಣಗೊಂಡರೂ ಎರಡು ಬದಿಗಳಲ್ಲಿ ಗೇಟುಗಳನ್ನು ಮುಚ್ಚಿರುವ ಸಣ್ಣ ನೀರಾವರಿ ಇಲಾಖೆಯ ತೀರ್ಮಾನದಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆ ಅನುಭವಿಸುವಂತಾಗಿದೆ. ಸಂಜೆ 7ರ ನಂತರ ಬರುವ ನಾಗರಿಕರು ಬೇಲಿ ಹಾರಿ ಬರುವ ಪರಿಸ್ಥಿತಿ ಇದ್ದು ಇದರಿಂದ ನಾಗರಿಕರ ಜೀವಕ್ಕೆ ಹಾನಿ ಆಗುವ ಸಾಧ್ಯತೆ ಇದ್ದು ಕೂಡಲೇ ಸಾರ್ವಜನಿಕರಿಗೆ 24 ಗಂಟೆ ಮುಕ್ತ ಓಡಾಟಕ್ಕೆ ಅವಕಾಶ ಕೊಡಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ.

ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅನುಕೂಲ ಆಗುವಂತೆ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಾಗಿ ಡಿವೈಎಫ್ಐ ನಾಯಕರ ನಿಯೋಗವು ಜಲಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿ ಮುಂದಿನ 15 ದಿನದ ಒಳಗಾಗಿ ಸಾರ್ವಜನಿಕರಿಗೆ ಮುಕ್ತವಾಗಿ ನಡೆದಾಡಲು ಅವಕಾಶ ಮಾಡಿಕೊಡಲು ಅಸಾಧ್ಯವಾದಲ್ಲಿ ಸಾರ್ವಜನಿಕರನ್ನು ಸಂಘಟಿಸಿ  ಹೋರಾಟವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಡಿವೈಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ  ಅಶ್ರಫ್ ಹರೇಕಳ, ಹರೇಕಳ ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಖಂಡಿಗೆ ಉಪಸ್ಥಿತರಿದ್ದರು ಎಂದು ಡಿವೈಎಫ್ಐ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು