2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು