8:17 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ

02/10/2022, 11:26

ಹೊನ್ನಾಳಿ(reporterkarnataka.com):

ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸಾಮಾನ್ಯ ಜನರಿಗೆ ದಾರಿದೀಪಗಳಿವೆ. ಮಠಗಳಲ್ಲಿ ನಡೆಯುತ್ತಿರುವ ದೈವಿ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಶ್ರದ್ದೆ ಮತ್ತು ಭಕ್ತಿಯನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವವುಳ್ಳ ಸತ್ಪ್ರಜೆಗಳಾಗಿ ಜೀವನ ನಡೆಸಲು ದಾರಿದೀಪಗಳಾಗಿವೆ  ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪೂಜ್ಯ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಪೂಜ್ಯ ಡಾ. ಬಸವಜಯಚಂದ್ರ ಮಹಾಸ್ವಾಮಿಗಳು, ಹಾಲಸ್ವಾಮಿ, ವಿರಕ್ತಮಠ, ಚನ್ನಗಿರಿರವರ ಆಶೀರ್ವಚನ ನೀಡಿದರು. 
ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ಬಸವರಾಜಪ್ಪ, ನಾಗರಾಜಪ್ಪ, ಜಗದೀಶಪ್ಪ, ಡಿ. ಬರಮಪ್ಪ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು