ಇತ್ತೀಚಿನ ಸುದ್ದಿ
ಮಂಗಳೂರು: ಗಾಂಧಿ ಜಯಂತಿ ಆಚರಣೆ; ರಾಜಾಜಿ ಪಾರ್ಕ್, ಪಾದಚಾರಿ ರಸ್ತೆ ಉದ್ಘಾಟನೆ
02/10/2022, 15:28
ಮಂಗಳೂರು(reporterkarnataka.com): ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಗಾಂಧಿ ಪಾರ್ಕ್ ನಲ್ಲಿ ಭಾನುವಾರ ಬೆಳಿಗ್ಗೆ ಭಾರತ ಸೇವಾದಳದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರದಾನಮಂತ್ರಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತೋತ್ಸವ ಆಚರಿಸಲಾಯಿತು.
ಕನ್ನಡ- ಸಂಸ್ಕೃತಿ ಹಾಗೂ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಎಂ.ಡಿ. ಪ್ರಶಾಂತ್ ಕುಮಾರ್ ಮಿಶ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ, ಜಿಲ್ಲಾ ಸಂಘಟಕ ಟಿ.ಎಸ್. ಮಂಜೇಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ಗಳು ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಖಾದಿ ಹಾರ ಸಮರ್ಪಿಸಿ, ಗೌರವ ನಮನ ಅರ್ಪಿಸಿದರು.
ಸರ್ವಧರ್ಮ ಪ್ರಾರ್ಥನೆಯನ್ನು ಹಾಡಲಾಯಿತು. ಭಾರತ ಸೇವಾ ದಳದ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ಕುದ್ಮುಲ್ ರಂಗರಾವ್ ಪುರಭವನ ಬಳಿಯ ಪಾದಾಚಾರಿ ಮಾರ್ಗ ಹಾಗೂ ರಾಜಾಜಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಎಂ.ಡಿ. ಪ್ರಶಾಂತ್ ಕುಮಾರ್ ಮಿಶ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್,
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ಎಂಜಿನಿಯರ್ ಗಳಾದ ಲಿಂಗೇಗೌಡ, ಮಂಜುಕೀರ್ತಿ ಸೇರಿದಂತೆ ಹಲವರಿದ್ದರು.