3:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು