8:17 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ 

02/10/2022, 18:13

ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಡಳಿತಾಧಿಕಾರಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸ.ಪ.ಪೂ, ಕಾಲೇಜು ಬಿ,ಮೂಡ ಬಂಟ್ವಾಳ ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು  ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಲಿದ್ದಾರೆ. ಲೇಖಕ ಹಾಗೂ ಸ್ನೇಹ ಪಬ್ಲಿಕ್ ಸ್ಕೂಲ್ ಬಜಾಲ್ ನ  ಶಿಕ್ಷಕ ಅಶೀರುದ್ದೀನ್ ಆಲಿಯಾ ಅವರು ಬರೆದ “ಬ್ಯಾರಿ ವಚನಮಾಲೆ” ಕೃತಿಯನ್ನು ಪತ್ರಕರ್ತ, ಸಾಹಿತಿ ಹಂಝ ಮಲಾರ್  ಬಿಡುಗಡೆ ಮಾಡಲಿದ್ದಾರೆ. ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್ ಮತ್ತು ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ  ಅವರು ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು