5:48 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮೈಸೂರಿನ ಬದನವಾಳುನಲ್ಲಿ ಗಾಂಧಿ ಪ್ರತಿಮೆಗೆ ರಾಹುಲ್ ಗಾಂಧಿ ಪುಷ್ಪ ನಮನ: ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿ

02/10/2022, 21:44

ಮೈಸೂರು(reporterkarnataka.com): ರಾಜ್ಯದಲ್ಲಿ ಗುಂಡ್ಲುಪೇಟೆಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿನ ಬದನವಾಳುನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಮೈಸೂರಿನ ಬದನವಾಳು ಗ್ರಾಮದಲ್ಲಿನ ಖಾದಿ ಗ್ರಾಮೋದ್ಯೋಗ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಬಾಪು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜನ ಸಾಮಾನ್ಯರ ಜೊತೆ ಕುಳಿತು ರಾಹುಲ್ ಪ್ರಾರ್ಥನೆಯಲ್ಲಿ ಭಾಗಿಯಾದರು. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಉಪಸ್ಥಿತರಿದ್ದರು. 

ನಂತರ ರಾಹುಲ್ ಹಾಗೂ ಇತರ ನಾಯಕರು ಕೈ ಮಗ್ಗಕ್ಕೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಿದರು. ಸಿಬ್ಬಂದಿಗಳ ಜೊತೆ ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು