12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: ನೀರು ಪಾಲಾದ ನಾಲ್ವರು ಸಹೋದರರ ಮೃತದೇಹ ಪತ್ತೆಗೆ ಮುಂದುವರಿದ ಶೋಧ ಕಾರ್ಯಾಚರಣೆ; ಗದ್ಗದಿತರಾದ ಸಹಾಯಕ ಕಮಿಷನರ್

29/06/2021, 15:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ತಾಯಿಯ ಅಳಲನ್ನು ಕೇಳಿ ಚಿಕ್ಕೋಡಿ ಸಹಾಯಕ ಕಮಿಷನರ್ ಯವಕೀಶ ಕುಮಾರ್ ಮೌನವಾಗಿ ರೋಧಿಸಿದರು. ಈ ನಡುವೆ ಮೃತದೇಹಗಳ ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ನಿನ್ನೆ ನಡೆದ ದುರ್ಘಟನೆಯಲ್ಲಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದರು.


ಚಿಕ್ಕೋಡಿಯ ಎಸಿ ಯವಕೀಶ ಕುಮಾರ್ ಅವರು ಮಡಿದ ಯುವಕರ ತಾಯಿಯ ಆಕ್ರಂಧನವನ್ನು ಕಂಡು ಕರಗಿ ಹೋದರು. ಮೃತ ಸಹೋದರರ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಘಟನಾ ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಎಸಿ ಸೂಚಿಸಿದರು.

ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಯವಕೀಶ ಕುಮಾರ್, ಈಗಾಗಲೇ ಜಿಲ್ಲಾಧಿಕಾರಿಗಳ ಮುತುವರ್ಜಿಯಿಂದ ಕೊಲ್ಲಾಪುರದ ಈಜುಗಾರರನ್ನು ಸ್ಥಳದಲ್ಲಿ ಕರೆಸಲಾಗಿದ್ದು ಆದಷ್ಟು ಬೇಗ ಮೃತ ಶರೀರಗಳನ್ನು ಪತ್ತೆ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು