11:02 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ

06/10/2022, 21:10

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಕಾಗವಾಡ  ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ಹಂಗಾಮಿಗೆ ಚಾಲನೆ ನೀಡಿ ಮಾತನಾಡುತ್ತಾ ಕಳೆದ ವರ್ಷ ಸನ್ 2021-22 ನೇ ಸಾಲಿನಲ್ಲಿ ನಮ್ಮ ಕಾರ್ಖಾನೆಗೆ ರೈತ ಬಾಂಧವರು ಸುಮಾರು 17 ಲಕ್ಷ ಟನ್ ಕಬ್ಬು ನೀಡಿ ಸಹಕರಿಸಿ, ವಿಶೇಷ ದಾಖಲೆ ನಿರ್ಮಿಸಲು ಕಾರಣೀಭೂತರಾಗಿದ್ದೀರಿ. ಅದೇ ಪ್ರಕಾರ ನಾವು ರೈತರಿಗೆ ಪ್ರತಿ ಟನ್ ಗೆ 2700 ರೂ. ರಂತೆ ದರವನ್ನು ನೀಡಿದ್ದೇವು.

ಈ ಸನ್ 2022 – 23 ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯೂ 20 ಲಕ್ಷ ಟನ್ ಕಬ್ಬು ನುರಿಸುವ ಉದ್ದೇಶವನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಟನ್ ಗೆ ರೂ. 2800/- ರಂತೆ ದರವನ್ನು ನೀಡಲು ಸಿದ್ಧರಾಗಿರುವುದಾಗಿ ಹೇಳಿದರು. 

ರೈತ ಬಾಂಧವರು ನಮ್ಮ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಸಹಕರಿಸುವಂತೆ ಶ್ರೀನಿವಾಸ ಪಾಟೀಲ ಮನವಿ ಮಾಡಿಕೊಂಡರು.

 ಈ ಸಮಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ, ಸುಶಾಂತ  ಪಾಟೀಲ, ಅಬ್ದುಲಬಾರಿ ಮುಲ್ಲಾ ಹಾಗೂ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಖಾನೆಯ ವಿವಿಧ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿಗಳು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು