8:57 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಆನ್ ಲೈನ್ ಬ್ಯಾಂಕಿಂಗ್ ಗೆ ಮೊಬೈಲ್ ವೈರಸ್ ಕಾಟ: ಸ್ಮಾರ್ಟ್ ಪೋನ್ ಸೇರುತ್ತಿರುವ ಭಯಾನಕ SOVA 

07/10/2022, 10:32

ಹೊಸದಿಲ್ಲಿ(reporterKarnataka.com): ದೇಶದ ಬ್ಯಾಂಕ್ ಗಳಿಗೆ ಮೊಬೈಲ್‌ ವೈರಸ್ ಕಾಟ ಶುರುವಾಗಿದೆ. ಆ ವೈರಸ್‌ ಹೆಸರೇ SOVA . ಎಸ್‌ಬಿ ಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗಳು SOVA ವೈರಸ್ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ. ಯಾವುದೇ ಕಾರಣಕ್ಕೂ ಅನಧಿಕೃತ ಮೂಲಗಳಿಂದ ಸ್ವೀಕರಿಸಿದ ಲಿಂಕ್ ಕ್ಲಿಕ್ ಮಾಡುವ ಮೂಲಕ ಯಾವುದೇ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿ ಇನ್‌ಸ್ಟಾಲ್ ಮಾಡದಂತೆ ಎಸ್‌ಬಿಐ ಹೇಳಿದೆ. ಇತ್ತ ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ SOVA ಟ್ರೋಜನ್ ವಿರುದ್ಧ ಬಳಕೆದಾರರಿಗೆ ಎಚ್ಚರಿಕೆ  ನೀಡಿದೆ.

ಭಯಾನಕ SOVA ಮಾಲ್‌ವೇರ್‌ನ ಇತ್ತೀಚಿನ ಆವೃತ್ತಿಯು ನಕಲಿ ಆಂಡ್ರಾಯ್ಡ್ ಅಪ್ಲಿಕೇಶನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ಗಳಲ್ಲಿ ಗುಪ್ತವಾಗಿ ಸೇರಿಕೊಳ್ಳುತ್ತಿದೆ. ಈ ವೈರಸ್ ಅನ್ನು Chrome, Amazon, NFT ಪ್ಲಾಟ್‌ಫಾರ್ಮ್‌ಗಳ ಲೋಗೊಗಳಂತೆ ರೂಪಿಸಲಾಗಿದ್ದು, ಸ್ಮಾರ್ಟ್‌ಫೋನ್ ಬಳಕೆದಾರರು ಇದಕ್ಕೆ ಸುಲಭವಾಗಿ ತುತ್ತಾಗುತ್ತಿದ್ದಾರೆ. ಒಮ್ಮೆ ಈ ವೈರಸ್ ಸ್ಮಾರ್ಟ್‌ಫೋನ್ ಒಳಗೆ ಸೇರಿಕೊಂಡರೆ, ಬಳಕೆದಾರರು ತಮ್ಮ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳಿಗೆ ಲಾಗ್ ಇನ್ ಮಾಡಿದಾಗ ಮತ್ತು ಬ್ಯಾಂಕ್ ಖಾತೆಗಳಿಗೆ ಪ್ರವೇಶಿಸಿದ ಎಲ್ಲಾ ಮಾಹಿತಿಯನ್ನು ಸೆರೆಹಿಡಿಯುತ್ತದೆ ಮತ್ತು ಈ ಮಾಹಿತಿಯನ್ನು ವಂಚಕರಿಗೆ ಕಳುಹಿಸಿಕೊಡುವುದು ಕಂಡು ಬಂದಿದೆ. ಹಾಗಾಗಿ, ಈ ಬಗ್ಗೆ ಗ್ರಾಹಕರು ಸಾಕಷ್ಟು ಎಚ್ಚರಿಕೆ ವಹಿಸಬೇಕು ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು