3:52 PM Friday29 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

ಇತ್ತೀಚಿನ ಸುದ್ದಿ

‘ಸೇ ನೋ ಟು ಡ್ರಗ್ಸ್’: ಸಾಲಿಡಾರಿಟಿ ಯೂತ್ ಮೂವ್’ಮೆಂಟ್ ನಿಂದ ‘ಮಾದಕ ದ್ರವ್ಯ ಮುಕ್ತ ಕರ್ನಾಟಕ’ ಅಭಿಯಾನ

07/10/2022, 18:27

ಬೆಂಗಳೂರು(reporter Karnataka): ಸಾಲಿಡಾರಿಟಿ ಯೂತ್ ಮೂವ್’ಮೆಂಟ್ ಕರ್ನಾಟಕದ ವತಿಯಿಂದ “ನಶಾ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಮಾತನಾಡಿ, ಯುವ ಪೀಳಿಗೆ ದಿನೇ ದಿನೇ ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದು ಅದರಲ್ಲೂ ವಿದ್ಯಾರ್ಥಿಗಳು ಈ ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿರುತ್ತದೆ. 

2021ರ ವರದಿಯ ಪ್ರಕಾರ ಜಗತ್ತಿನ 27.5 ಕೋಟಿ ಜನರು ಮಾದಕ ವ್ಯಸನಿಗಳಾಗಿದ್ದು ಇವರಲ್ಲಿ 3.7 ಕೋಟಿ ಜನರು ತತ್ಸಬಂಧೀ ರೋಗಗಳಿಂದ ಬಳಲುತ್ತಿದ್ದಾರೆ. “ಎನ್‌ಸಿಆರ್‌ಬಿ ಪ್ರಕಟಿಸಿದ ಇತ್ತೀಚಿನ ಮಾಹಿತಿಯ ಪ್ರಕಾರ, 2018, 2019 ಮತ್ತು 2020 ರಲ್ಲಿ ಮಾದಕ ವ್ಯಸನ ಮತ್ತು ಮದ್ಯದ ಚಟದಿಂದಾಗಿ ಒಟ್ಟು ಆತ್ಮಹತ್ಯೆಗಳ ಸಂಖ್ಯೆ ಕ್ರಮವಾಗಿ 7,193, 7,860 ಮತ್ತು 9,169 ಆಗಿದೆ ಎಂದರು. 

ರಾಜ್ಯ ಗೃಹ ಇಲಾಖೆಗಳ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 16 ಡ್ರಗ್ ಪ್ರಕರಣಗಳು ಕಂಡುಬರುತ್ತಿದ್ದು, ಅದರಲ್ಲಿ ಮಾದಕ ವಸ್ತುಗಳ ಸೇವನೆ, ಸ್ವಾಧೀನ ಮತ್ತು ವ್ಯವಹರಗಳ ಪ್ರಕರಣಗಳು ದಾಖಲಾಗುತ್ತಿದೆ. ದೇಶದ ವಿವಿಧ ನಗರಗಳ 16 ರಿಂದ 20 ವರ್ಷದ ಸಾವಿರ ಯುವಕರಲ್ಲಿ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ಶೇ. 47 ಜನರು ಸಿಗರೇಟು ಸೇವಿಸುವುದಾಗಿದ್ದು, ಶೇ. 20 ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆ. ಅದರಲ್ಲಿ ಶೇ 83 ಯುವಕರಿಗೆ ಈ ಚಟದಿಂದ ಹೇಗೆ ಹೊರಬರಬೇಕೆಂದು ತಿಳಿದಿಲ್ಲ. ಇದು ಇಂದಿನ ಯುವಕರು ಅನುಭವಿಸುತ್ತಿರುವ ಒಂದು ಜ್ವಲಂತ ಸಮಸ್ಯೆಯಾಗಿದ್ದು, ಸಾಮಾಜಿಕ ಪಿಡುಗುಗಾಗಿ ಪರಿಣಮಿಸಿದೆ. ಈ ಮಾದಕ ವಸ್ತುವಿನ ಜಾಲವು ರಾಜಾರೋಷವಾಗಿ ನಮ್ಮ ಮಧ್ಯೆ ವ್ಯಾಪಿಸಿರುವುದು ದುರಂತವಾಗಿದೆ.

ಸರಕಾರ, ಸಂಘ ಸಂಸ್ಥೆಗಳು, ಸಾರ್ವಜನಿಕರು ಒಂದಾಗಿ ಇದರ ವಿರುದ್ಧ ಸಮರ ಸಾರಬೇಕು. ವಿದ್ಯಾವಂತ ಸಮೂಹವೇ ಅತಿ ಹೆಚ್ಚು ಮಾದಕ ವ್ಯಸನಿಗಳಾಗುತ್ತಿರುವುದು ಕಳವಳಕಾರಿ. ಇಂತಹ ಪ್ರಕರಣಗಳು ಒಂದು ಪ್ರದೇಶಕ್ಕೆ ಸೀಮಿತವಾಗಿರದೆ ಅನೇಕ ಕಡೆಗಳಲ್ಲಿ ಹರಡಿದೆ. ಯುವಕರು ಇದರ ವಿರುದ್ಧ ಧ್ವನಿ ಎತ್ತಬೇಕಾಗಿದೆ.

ಈ ಹಿನ್ನಲೆಯಲ್ಲಿ ಸಾಲಿಡಾರಿಟಿ ಯೂತ್ ಮೂವ್’ಮೆಂಟ್ ಕರ್ನಾಟಕ ರಾಜ್ಯವು ಅಕ್ಟೋಬರ್ 10 ರಿಂದ ನವೆಂಬರ್ 10ರ ತನಕ ‘ಸೇ ನೋ ಟು ಡ್ರಗ್ಸ್’ ಮಾದಕ ವಿರೋಧಿ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಪ್ರಯುಕ್ತ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯಾದ್ಯಾಂತ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ, ಶಾಲಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ, ಸಾಮಾಜಿಕ ಜಾಲಾತಾಣದ ಮೂಲಕ ಜಾಗೃತಿ, ಸಂಘ ಸಂಸ್ಥೆಗಳ ಸಹಕಾರಗಳೊಂದಿಗೆ ಈ ಕುರಿತು ಸಂವಾದ, ಜಾಗೃತಿ ಜಾಥ, ಪೋಷಕರಿಗೆ ಕಾರ್ಯಗಾರ, ಶಿಕ್ಷಕರ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ಉಪನ್ಯಾಸ, ಭಿತ್ತಿಪತ್ರ ವಿತರಣೆ ಇಂತಹ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು, ಸಂಪೂರ್ಣ ಸಹಕಾರ ನೀಡ ಬೇಕೆಂದು ಈ ಮೂಲಕ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರೆ ನೀಡುತ್ತದೆ.

ಸಾಲಿಡಾರಿಟಿ ಇದೇ ಡಿಸೆಂಬರ್ 18ರಂದು “ಭರವಸೆ-ಮರುನಿರ್ಮಾಣ-ಘನತೆ” ಎಂಬ ಧ್ಯೇಯವಾಕ್ಯದಡಿ ರಾಜ್ಯಮಟ್ಟದ ಯುವ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು, ಈ ಪ್ರಯುಕ್ತ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಾಡಿನಾದ್ಯಂತ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಿಯಾನ್ ಉಡುಪಿ, ಸಾಲಿಡಾರಿಟಿ ಸ್ಪೋರ್ಟ್ಸ್ ಕ್ಲಬ್ ಸಂಚಾಲಕರು ಇಮ್ತಿಯಾಜ್, ಅಭಿಯಾನದ ಸಂಚಾಲಕರಾದ ಅಖಿಲ್ ಬೆಂಗಳೂರು ಹಾಗೂ ಮಾಧ್ಯಮ ಕಾರ್ಯದರ್ಶಿ ನವಾಝ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು