9:01 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ನಿಡ್ಡೋಡಿ: ಸೀಪುಡ್ ಕಾರ್ಖಾನೆ ಸ್ಥಳ ಪರಿಶೀಲನೆಗೆ ಆಗಮಿಸಿದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್ ಗೆ ಘೇರಾವ್

29/06/2021, 19:33

ಮೂಡುಬಿದರೆ(reporterkarnataka news): ಸೀಪುಡ್ ಕಾರ್ಖಾನೆ ನಿರ್ಮಾಣ ಕುರಿತು ಸ್ಥಳ ಪರಿಶೀಲನೆಗೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕೆ  ಸಚಿವ ಎಸ್. ಅಂಗಾರ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಮಂಗಳವಾರ ನಿಡ್ಡೋಡಿಯಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದರು.

ಸಚಿವರು ಹಾಗೂ ಶಾಸಕರು ಸ್ಥಳ ಪರಿಶೀಲನೆಗೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಮುತ್ತಿಗೆ ಹಾಕಿ ವಿರೋಧ ವ್ಯಕ್ತಪಡಿಸಿದರು. ಸೀಪುಡ್ ಕಾರ್ಖಾನೆ ಬಗ್ಗೆ ತಮಗೆ ಮಾಹಿತಿ ನೀಡದೆ ಗುಪ್ತವಾಗಿ ಕಾರ್ಯ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಪಾದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರು, ನಿಮಗೆ ಬೇಡದಿದ್ದರೆ ಬೇಡ ಎಂದರು. ಗ್ರಾಮಸ್ಥರೆಲ್ಲ ಒಕ್ಕೊರಲಿನಲ್ಲಿ ನಮಗೆ ಬೇಡ, ಬೇಡ ಎಂದು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು