9:00 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ

09/10/2022, 23:55

ಮಂಗಳೂರು(reporter Karnataka.com):
ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿ ಕೆಯ ಸಹಭಾಗಿತ್ವದಲ್ಲಿಹಮ್ಮಿಕೊಂಡಿ ರುವ ಬ್ರ್ಯಾಂಡ್ ಮಂಗ ಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿಂದು ಉದ್ಘಾಟಿಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರ ಕರ್ತರು ಸಾಕಷ್ಟು ಒತ್ತಡ ಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮ ದಲ್ಲಿಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿ ತ್ತಾಯ,ಅಪರ ಜಿಲ್ಲಾ ಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿ ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ,ಆರಿಫ್ ಪಡು ಬಿದ್ರೆ, ಪುಷ್ಪ ರಾಜ್ ಬಿ.ಎನ್,ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್ ,ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು