1:02 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಸುಲಿಗೆಯ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಕೂಟಗಳ ಪಾಲು: ಅಭಯ ಚಂದ್ರ ಜೈನ್ ಆರೋಪ

10/10/2022, 19:16

ಮಂಗಳೂರು(reporterkarnataka.com):ಸರಕಾರದ ತೀರ್ಮಾನದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲೆಂದೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ್ಡಿಯಾಗಿದ್ದಾರೆ. ಈ ಅಕ್ರಮದಲ್ಲಿ ಸಂಸದರು, ಶಾಸಕರುಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಗಂಭೀರ ಆರೋಪ ಮಾಡಿದರು.


ಅಕ್ಟೋಬರ್ 18 ರಂದು ನಡೆಯಲಿರುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯ ಸಿದ್ದತೆಗಾಗಿ ಮೂಡಬಿದ್ರೆ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ ಶಾಂತಿಯುತವಾಗಿ ನಡೆಯಲಿರುವ ಟೋಲ್ ಗೇಟ್ ಮುತ್ತಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಪ್ರೇರೇಪಿಸಬೇಕು, ಆ ಮೂಲಕ ಬಿಜೆಪಿಯ ಜನ ವಿರೋಧಿ ಆಡಳಿತಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಾಗಬೇಕು ಎಂದು ಹೇಳಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್, ವಕ್ತಾರ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ,,ಮಹೇಶ್ ಪ್ರಭು, ಕರೀಂ, ಕಾರ್ಮಿಕ ಮುಂದಾಳುಗಳಾದ ರಮಣಿ, ಲಕ್ಷ್ಮಿ ಮೂಡಬಿದ್ರೆ, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ರೈತ ಸಂಘದ ಲಿಯೋ ನಝರತ್, ಓಲ್ವಿನ್ ಮೆನೇಜಸ್, ಸುಂದರ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ‌ ಆಸಿಫ್ ಮೂಡಬಿದ್ರೆ, ಸಾಮಾಜಿಕ ಕಾರ್ಯಕರ್ತರಾದ ಹೇಮಲತಾ, ಮಾನಸಿ ಶೆಟ್ಟಿ, ನಿಸಾರ್ ಕರಾವಳಿ, ಸಿರಾಜ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು