5:50 AM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್

10/10/2022, 20:30

ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ) ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಆರಂಭಗೊಂಡ ಸಮುದಾಯ ವಾಚನಾಲಯದ ನವೀಕೃತ ಕೊಠಡಿಯ ಉದ್ಘಾಟನೆ ಮತ್ತು ಪತ್ರಿಕಾ ವಿತರಣಾ ವಾಹಕ (ಟ್ರಾಲಿ ) ಸಮರ್ಪಣಾ ಕಾರ್ಯಕ್ರ ಮದ ನೆರವೇರಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿದಿನ ನೂರಾರು ರೋಗಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಸಹಾಯಕರಾಗಿಯೂ ಸಾಕಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಅವರಿಗೆ ಓದಲು ಪುಸ್ತಕ, ಪತ್ರಿಕೆ ಓದಲು ಸಮು ದಾಯ ವಾಚನಾಲಯದ ಮೂಲಕ ಮಾಡುವ ಯೋಜನೆ ಶ್ಲಾಘನೀಯ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪತ್ರಿಕಾ ವಿತರಣಾ ವಾಹನ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆಯ ಸಭಾಪತಿ ಶಾಂತರಾಮ ಶೆಟ್ಟಿ ,ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ಸದಾಶಿವ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್. ಕಾಮತ್, ದ.ಕ ಜಿಲ್ಲಾ ರೆಡ್ ಕ್ರಾಸ್ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ,ಆಡಳಿತ ಮಂಡಳಿ ಸಮಿತಿ ಸದಸ್ಯೆ ಡಾ.ಸುಮನಾ ಬೋಳಾರ್, ಸದಸ್ಯ ರಾದ ರವೀಂದ್ರ ನಾಥ ಉಚ್ಚಿಲ್ ,ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ಮಾಜಿ ಮಾನಪ ಸದಸ್ಯ ಪದ್ಮನಾಭ ಅಮೀನ್ ,ಮಂಗಳೂರು ರಥ ಬೀದಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಉಪಸ್ಥಿತರಿದ್ದು ರೋಗಿಗ ಳಿಗೆ ನಿಯತಕಾಲಿಕ ಪತ್ರಿಕೆಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು