1:36 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮುಂದಿನ ತಿಂಗಳು ರಾಜ್ಯಕ್ಕೂ ಬರಲಿದೆ ಪರಿಸರಸ್ನೇಹಿ ಕೆಎಸ್ಸಾರ್ಟಿಸಿ ಎಲೆಕ್ಟ್ರಿಕಲ್ ಬಸ್‍ಗಳು!

11/10/2022, 21:28

ಮಂಗಳೂರು (reporter Karnataka.com): ರಾಜ್ಯದಲ್ಲಿ ಒಂದು ತಿಂಗಳೊಳಗೆ ಪರಿಸರಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು.

ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯವರ ಕಚೇರಿಯಲ್ಲಿ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೊದಲ ಹಂತದಲ್ಲಿ ಮುಂದಿನ ತಿಂಗಳೊಳಗೆ 50 ಎಲೆಕ್ಟ್ರಿಕಲ್ ಬಸ್‍ಗಳ ಸಂಚಾರ ಆರಂಭವಾಗಲಿದೆ. ಇಂಧನ ಬೆಲೆಯೇರಿಕೆ, ಟಯರ್ ಹಾಗೂ ಬಸ್ ಬಿಡಿ ಭಾಗಗಳ ಬೆಲೆಯೇರಿಕೆಯಾದರೂ ಪ್ರಯಾಣಿಕರ ಹಿತ ದೃಷ್ಟಿಯಿಂದ ಪ್ರಯಾಣಿಕರ ಟಿಕೆಟ್ ದರ ಹೆಚ್ಚಿಸಿಲ್ಲ, 60 ವರ್ಷಗಳ ಇತಿಹಾಸದಲ್ಲೇ ಇದೀಗ ತಿಂಗಳ ಮೊದಲ ದಿನವೇ ರಾಜ್ಯದ ಎಲ್ಲ ಕೆಎಸ್ಸಾರ್ಟಿಸಿ ಉದ್ಯೋಗಿಗಳಿಗೆ ವೇತನ ನೀಡಲಾಗುತ್ತಿದೆ. 6ವೇತನ ಆಯೋಗದ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ನುಡಿದರು.
ರಾಜ್ಯದಲ್ಲಿ 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ಓಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳು ಸೇರಿವೆ ಎಂದು ಅವರು ಹೇಳಿದರು.
ಮಂಗಳೂರು ವಿಭಾಗದಲ್ಲಿ ಸದ್ಯ 490 ಬಸ್‍ಗಳು ಪ್ರತಿದಿನ ಸಂಚರಿಸುತ್ತಿದ್ದು, ದಿನನಿತ್ಯ 1 ಕೋಟಿಯಷ್ಟು ವರಮಾನವಿದೆ, ಆದರೆ ಪುತ್ತೂರು ವಿಭಾಗದಲ್ಲಿ ವರಮಾನ ಕಡಿಮೆಯಿದ್ದರೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿರುವ ಕಾರಣ ಬಸ್‍ಗಳನ್ನು ಕಡಿತಗೊಳಿಸಿಲ್ಲ ಎಂದರು.

ಕೋವಿಡ್ ಹಾಗೂ ಇತರೆ ಕಾರಣಗಳಿಂದ ಈ ಹಿಂದೆ ಸರ್ಕಾರಿ ಬಸ್‍ಗಳಿಂದ ದಿನವೊಂದಕ್ಕೆ 6 ರಿಂದ 7ಕೋಟಿಗಳಷ್ಟು ಆದಾಯ ಬರುತ್ತಿತ್ತು, ಆದರೆ ಸದ್ಯ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ದಿನವೊಂದಕ್ಕೆ ಕನಿಷ್ಟ 12ಕೋಟಿಯಷ್ಟು ವರಮಾನ ಬರುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಸದ್ಯ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದರು.

ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹಾಗೂ ಪುತ್ತೂರು ವಿಭಾಗಿಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು