9:52 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಪೇಜಾವರ ಶ್ರೀಗಳಿಂದ ಮಾಜಿ ಉಪ ಪ್ರಧಾನಿ ಅಡ್ವಾಣಿ ಭೇಟಿ: ಶ್ರೀಕೃಷ್ಣನ ಗಂಧ ಪ್ರಸಾದ, ಸ್ಮರಣಿಕೆ ಅರ್ಪಣೆ

12/10/2022, 21:41

ಹೊಸದಿಲ್ಲಿ(reporterkarnataka.com); ಉಡುಪಿ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮ ಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು . ಶ್ತೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು.


ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು.ಅಡ್ವಾಣಿ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು.ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು.


ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು