11:57 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ…

ಇತ್ತೀಚಿನ ಸುದ್ದಿ

ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ, ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

12/10/2022, 21:56

ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಶಾಸಕ ಕಾಮತ್, ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕೆಲಸ ಪ್ರಾರಂಭಿಸಲು ಸೂಚಿಸಿದ್ದೇನೆ. ಸದ್ಯ ಕಿರಿದಾದ ರಸ್ತೆಯಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಹಾಗಾಗಿ ರಸ್ತೆ ಅಗಲೀಕರಣಗೊಳಿಸಿ ತಡೆಗೋಡೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಮುಖಂಡರಾದ ಜಗದೀಶ್ ಶೆಣೈ, ಕೃಷ್ಣ ಎಸ್.ಆರ್, ಜನಾರ್ದನ್ ದೇವಾಡಿಗ, ಜಗನ್ನಾಥ ದೊಡ್ಡಮನೆ, ಸರಳ ಕುಲಾಲ್, ಅರುಣ್ ಶೆಟ್ಟಿ, ಪುರುಷೋತ್ತಮ ಕೋಟ್ಯಾನ್, ಕಿರಣ್ ದೇವಾಡಿಗ ಮರೋಳಿ, ಪ್ರಶಾಂತ್ ಮರೋಳಿ, ಅನಿತಾ ಅರುಣ್, ಮಾಲತಿ ಅರುಣ್ ಶೆಟ್ಟಿ, ರಾಜೇಶ್, ಪ್ರಮೀಳಾ ಶೆಟ್ಟಿ, ಲೀಲಾ ಸತೀಶ್, ರಾಘವೇಂದ್ರ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು