6:45 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ

14/10/2022, 09:47

ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್​ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

2018ರ ಚುನಾವಣೆಯಲ್ಲಿ ಗರುಡಾಚಾರ್ ಅವರು
ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.
ಗರುಡಾಚಾರ್ 2018 ರಲ್ಲಿ ಚಿಕ್ಕಪೇಟೆ ಚುನಾವಣೆಯ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರು. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಪ್ರಕಾಶ್ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಉದಯ್ ಗರುಡಾಚಾರ್ ಅವರು ಶಿಕ್ಷೆ ಪ್ರಕಟವಾದ ಬಳಿಕ ಜಾಮೀನುಗಾಗಿ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ಕೋರ್ಟ್ ಜಾಮೀನು ನೀಡಿದೆ. 25,000 ರೂಪಾಯಿ ಬಾಂಡ್, ಶ್ಯುರಿಟಿ ಒದಗಿಸಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು