2:06 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ವಿಜಯನಗರ: ದಲಿತರ ಮನೆಗೆ ಹಾಲಿ- ಮಾಜಿ ಮುಖ್ಯಮಂತ್ರಿಗಳು ಭೇಟಿ; ಉಪಹಾರ ಸೇವನೆ

14/10/2022, 10:38

ವಿಜಯನಗರ(reporter Karnataka.com): ಜನಸಂಕಲ್ಪ ಯಾತ್ರೆಯ ವೇಳೆ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿರುವ ದಲಿತ ಕುಟುಂಬದ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಉಪಹಾರ ಸವಿದರು.

ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿದ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರೊಂದಿಗೆ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.


ಮುಖ್ಯಮಂತ್ರಿಯವರು ದಲಿತ ಕುಟುಂಬ ಸದಸ್ಯರ ಕುಶಲೋಪಚಾರಿ ವಿಚಾರಿಸಿದರು. ಬಳಿಕ ಕೊಲ್ಲಾರಪ್ಪ ಅವರ ಪುತ್ರಿ ಹುಲಿಗೆಮ್ಮ ಹಾಗೂ ರೇಣುಕಾ ಅವರು ಪ್ರೀತಿಯಿಂದ ತಯಾರಿಸಿದ ಸ್ವಾದಿಷ್ಟ ಭರಿತ ಉಪಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಶಾಸಕರಾದ ರಾಜುಗೌಡ ಸೇರಿದಂತೆ ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು