12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮತಾಂತರ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ಯಶವಂತಪುರ ಠಾಣೆಯಲ್ಲಿ ದಾಖಲು; ಯುವಕನ ಬಂಧನ

14/10/2022, 21:25

ಬೆಂಗಳೂರು(reporterkarnataka.com); ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ನಗರದ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸೈಯದ್ ಮೊಯಿನ್ (24) ವಿರುದ್ಧ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಬೇಕಾದರೆ ಮತಾಂತರ ಆಗಬೇಕೆಂದು ಯುವತಿಯನ್ನು ಬಲವಂತವಾಗಿ ಮಾಡಿದ್ದನೆಂದು ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಯುವತಿ ಕುಟುಂಬ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿದ್ದರು.ಯುವತಿಯು ಚಿಕನ್ ಸ್ಟಾಲ್ ಇಟ್ಟುಕೊಂಡಿದ್ದ ಮೊಯಿನ್ ನ ಪ್ರೀತಿಸುತ್ತಿದ್ದಳು. ಯುವಕ ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.ಯುವಕನ ಒತ್ತಡದಿಂದ ಯುವತಿ ಮತಾಂತರಗೊಂಡಿದ್ದಾಳೆ ಎಂದು ಆರೋಪಿಸಿ‌ ದೂರು ನೀಡಲಾಗಿದೆ.ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು