10:55 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು