1:59 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಮುರುಘಾ ಮಠದಲ್ಲಿ ಹೆಣ್ಣು ಮಗು ಪತ್ತೆ: ಮತ್ತೊಂದು ಸಂಕಷ್ಟದಲ್ಲಿ ಶರಣರು

15/10/2022, 21:10

ಚಿತ್ರದುರ್ಗ(reporterkarnataka.com): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮುರುಘಾ ಶ್ರೀಗಳ ಮುರುಘಾ ಮಠದಲ್ಲಿ ಹೆಣ್ಣು ಮಗುವೊಂದು ಪತ್ತೆಯಾಗುವ ಮೂಲಕ ಮತ್ತೊಂದು ಪ್ರಕರಣ ತಲೆ ಎತ್ತಿದೆ.

ಮಠದ ಅವರಣದಲ್ಲಿ ಹೆಣ್ಣು ಮಗು ಪತ್ತೆಯಾಗಿದೆ. ಮಠದ ವಸತಿ ಶಾಲೆಯಲ್ಲಿ ಹೆಣ್ಣು ಮಗು ಪತ್ತೆಯಾಗಿದೆ. ಈ ವಸತಿ ಶಾಲೆಯು ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿದೆ ಎನ್ನುವುದು ಕುತೂಹಲಕಾರಿ ಅಂಶವಾಗಿದೆ.

ಮಠದ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆಗಸ್ಟ್‌ 26ರಂದು ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ವಸತಿ ಶಾಲೆಯಲ್ಲಿದ್ದ ಮಕ್ಕಳು ಶಿಫ್ಟ್‌ ಮಾಡಲಾಗಿತ್ತು.

ಮಕ್ಕಳನ್ನು ಸರ್ಕಾರಿ ವಸತಿ ಶಾಲೆ, ಬಾಲ ಮಂದಿರಕ್ಕೆ ಶಿಫ್ಟ್‌ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆ. ಹೆಣ್ಣು ಮಗುವಿನ ಪೋಷಕರ ಬಗ್ಗೆ ವಿವರ ಲಭ್ಯವಿಲ್ಲ. ಪೋಷಕರ ಪತ್ತೆಗಾಗಿ ಮಕ್ಕಳ ರಕ್ಷಣಾ ಘಟಕ ಜಾಹೀರಾತುವನ್ನೂ ನೀಡಿದೆ. ಚಿಗುರು ಹೆಸರಿನ ನಾಲ್ಕೂವರೆ ವರ್ಷದ ಹೆಣ್ಣು ಮಗು ಇದಾಗಿದ್ದು. ಮಠದ ಹಾಸ್ಟೆಲ್ ನಲ್ಲಿ ಅನಧಿಕೃತವಾಗಿ ಮಗು ಇರಿಸಿಕೊಂಡ ಆರೋಪ ಹೊರಿಸಲಾಗಿದೆ. ಅದಲ್ಲದೆ, ಮಡಿಲು ಯೋಜನೆಗೆ ಮಗುವನ್ನು ಸೇರಿಸದ ಆರೋಪವನ್ನೂ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ, ಜಿಲಾಡಳಿತಕ್ಕೆ ದೂರು ನೀಡಿ ತನಿಖೆಗೆ ಆಗ್ರಹಿದ್ದು, ದೂರು ನೀಡಿದ ಬಳಿಕ ಅಧಿಕಾರಿಗಳು ಕೂಡ ಅಲರ್ಟ್‌ ಆಗಿದ್ದಾರೆ.

ಮಠದಲ್ಲಿ ಪುಟ್ಟ ಮಕ್ಕಳನ್ನು ಅನಧಿಕೃತವಾಗಿ ಇರಿಸಲಾಗಿತ್ತೆಂಬ ಆರೋಪವನ್ನು ಮುರುಘಾ ಶ್ರೀಗಳ ಮೇಲೆ ಹೊರಿಸಲಾಗಿದೆ. ಒಟ್ಟಾರೆ ಶರಣರು ಮತ್ತೊಂದು ಸಂಕಷ್ಟ ಎದುರಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು