8:57 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಶಿರೂರು: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

16/10/2022, 10:28

ಶಿರೂರು(reporterkarnataka.com): ಶಿರೂರು ಕೆಳಪೇಟೆಯಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ರವಿ ಮೇಸ್ತ ಎಂದು ಗುರುತಿಸಲಾಗಿದೆ.

ರವಿ ಮೇಸ್ತ ಅವರು ಶಿರೂರು ಮೇಲ್ಪೇಟೆ ಕಡೆಯಿಂದ ಹೆದ್ದಾರಿಯ ಪೂರ್ವ ದಿಕ್ಕಿನಲ್ಲಿ ಬಂದು ಶಿರೂರು ಕೆಳಪೇಟೆಯ ಯೂ-ಟರ್ನ್ ಬಳಿ ರಸ್ತೆಯನ್ನು ದಾಟಲು ತಮ್ಮ ಬೈಕ್ ನ್ನು ನಿಲ್ಲಿಸಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಹೆದ್ದಾರಿಯ ಪಶ್ಚಿಮ ಬದಿಯ ರಸ್ತೆಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಚಾಲಕ ಮೈನುದ್ದೀನ್ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಪರಿಣಾಮ ರವಿ ಮೇಸ್ತ ಅವರು ಬೈಕ್ ಸಮೇತ ಲಾರಿಯ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಲಾರಿ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಉಸಿರುಚೆಲ್ಲಿದ್ದಾರೆ. ಈ ಬಗ್ಗೆ ಶಿರೂರಿನ ನಾಗರಾಜ ಮೇಸ್ತ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು