3:52 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮರೋಳಿ ವಾರ್ಡಿನ ಕನಪತಗ್ಗು ರಸ್ತೆ ಬದಿ ತಡೆಗೋಡೆ, ಕಲ್ವರ್ಟ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

16/10/2022, 10:37

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಕನಪತಗ್ಗುವಿನಲ್ಲಿ ರಸ್ತೆ ಬದಿ ತಡೆಗೋಡೆ ನಿರ್ಮಾಣ ಹಾಗೂ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್
ಭೂಮಿಪೂಜೆ ನೆರವೇರಿಸಿದರು.

ಈ ವಿಚಾರದ ಕುರಿತು ಮಾತನಾಡಿದ ಅವರು, ಕನಪತಗ್ಗು ಪ್ರದೇಶದಲ್ಲಿ ಕಲ್ವರ್ಟ್ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆಬದಿ ತಡೆಗೋಡೆ ನಿರ್ಮಾಣಕ್ಕೂ ಕೂಡ ಅನುದಾನ ಒದಗಿಸಲಾಗಿದ್ದು ಎರಡೂ ಕಾಮಗಾರಿಗಳು ಕೂಡ ಪ್ರಾರಂಭಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ದೇವಾಡಿಗ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್‌ ಮರೋಳಿ, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ , ಜನಾರ್ಧನ ದೇವಾಡಿಗ, ಬೋಜ ಅಮೀನ್, ಅನಿತಾ, ಸುಮನಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು. ‌

ಇತ್ತೀಚಿನ ಸುದ್ದಿ

ಜಾಹೀರಾತು