8:18 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ

16/10/2022, 10:58

ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಈ ಘೋರ ದುರಂತ ನಡೆದಿದೆ.
ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಭೀಕರ ದುರಂತ ಸಂಭವಿಸಿದೆ.ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತಪಟ್ಟವರನ್ನು ದೊಡ್ಡಯ್ಯ (60), ಭಾರತಿ (50 ), ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12 ವರ್ಷ ), ತನ್ಮಯ್ (10ವರ್ಷ ), ಧ್ರುವ (2 ), ವಂದನಾ (20 ) ಎಂದು ಗುರುತಿಸಲಾಗಿದೆ.
ಒಟ್ಟು 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳ – ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಕುಟುಂಬ ದರ್ಶನ ಮುಗಿಸಿಕೊಂಡು ವಾಪಾಸಾಗುತ್ತಿತ್ತು. ಈ ವೇಳೆಯಲ್ಲಿ ಟೆಂಪೋ ಟ್ರಾವೆಲರ್ ಗೆ ಎದುರುಗಡೆ ರಾಂಗ್ ಸೈಡ್ ನಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಲ್ಲದೇ ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಹಾಲಿನ ಟ್ಯಾಂಕರ್ ಶಿವಮೊಗ್ಗದಿಂದ ಚನ್ನರಾಯಪಟ್ಟಣದ ಕಡೆಗೆ ಚಲಿಸುತ್ತಿತ್ತು. ಅಪಘಾತ ಸಂಭವಿಸುತ್ತಿದ್ದಂತೆಯೇ ಹಾಲಿನ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬಾಣಾವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು