8:01 PM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವು; ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

18/10/2022, 16:08

ಮಂಗಳೂರು(reporterkarnataka.com): ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ.

ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ತೆರವು ಒತ್ತಾಯಿಸಿ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ ಎಂದು ಹೇಳಿದರು.

ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜತೆ ಮಾತನಾಡಿದ್ದೇನೆ ಎಂದು ಸಂಸದರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು