12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೆಮ್ಮಣ್ಣು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಹಠಾತ್ ಸಾವು

18/10/2022, 19:48

ಮಲ್ಪೆ(reporter Karnataka.com):
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಹಠಾತ್ ಆಗಿ ಮೃತಪಟ್ಟ ಘಟನೆ ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕಂಬಳತೋಟ ಎಂಬಲ್ಲಿ ನಡೆದಿದೆ.

ಕಂಬಳತೋಟ ನಿವಾಸಿ ವಸಂತಿ ಅವರ ಮಗಳು ಸ್ಮಿತಾ(32) ಮೃತದುರ್ದೈವಿ. ಇವರು ಅ.8ರಂದು ಒರಿಸ್ಸಾ ರಾಜ್ಯ ಪ್ರವಾಸ ಕೈಗೊಂಡು, ಅ.16ರಂದು ಊರಿಗೆ ವಾಪಾಸ್ಸಾಗಿದ್ದರು. ಆ ಬಳಿಕ ಸ್ಮೀತಾ ಅವರಿಗೆ ತೀವ್ರ ಕೆಮ್ಮು ಬಂದಿದ್ದು, ಔಷಧ ಸೇವಿಸಿ ಮಲಗಿದ್ದರು. ಅ.17ರಂದು ಉಸಿರಾಟ ಸಮಸ್ಯೆ ತೀವ್ರಗೊಂಡಿದ್ದು, ಉಡುಪಿ ಗಾಂಧಿ ಅಸ್ಪತೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿಂದ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸ್ಮಿತಾ ಮೃತಪಟ್ಟಿದ್ಧಾರೆ ಎಂದು ತಿಳಿಸಿದ್ಧಾರೆ.

ಸ್ಮಿತಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು