4:50 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು