11:15 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್‌ಗೇಟ್ ತೆರವು: ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್

22/10/2022, 15:44

ಉಡುಪಿ(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್‌ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್‌ಗೇಟ್ ತೆರವು ಮಾಡಲಾಗುವುದು.ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್ ಹೇಳಿದರು.

ಶನಿವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ನನಗಿರುವ ಮಾಹಿತಿ ಪ್ರಕಾರ ನವೆಂಬರ್ ಅಂತ್ಯಕ್ಕೆ ತೆರವಾಗಲಿದೆ ಎಂದರು.

ಮಾಜಿ ಕಾರ್ಪೋರೇಟರ್ , ಕಾಂಗ್ರೆಸ್ ಮುಖಂಡೆ
ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಟ್ರೋಲ್ ಕುರಿತು ಕೇಳಲಾದ ಪ್ರಶ್ನೆಗೆ ಸಚಿವರು, ‘ನೋ ಕಮೆಂಟ್ಸ್’ ಎಂದು ನುಣುಚಿಕೊಂಡರು.

ಕಲ್ಲಿದ್ದಲು ಮತ್ತು ಕಚ್ಚಾ ವಸ್ತುಗಳ ದರಕ್ಕನುಗುಣವಾಗಿ ವಿದ್ಯುತ್ ದರ ಪರಿಷ್ಕರಣೆಯಾಗುತ್ತದೆ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಪ್ರಿಪೇಯ್ಡ್‌ ಮೀಟರ್‌ಗಳನ್ನು ಮೊದಲು ಸರಕಾರಿ ಇಲಾಖೆಗಳಲ್ಲಿ ಅಳವಡಿಸಲಾಗುವುದು. ಸರಕಾರಿ ಇಲಾಖೆಗಳಿಂದ ಇಂಧನ ಇಲಾಖೆಗೆ ಸುಮಾರು 6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಯಾಗಲು ಬಾಕಿ ಇದೆ ಎಂದವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು