8:39 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು