ಇತ್ತೀಚಿನ ಸುದ್ದಿ
ಅಥಣಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು; ನುರಿತ ಈಜುಗಾರರಿಂದ ಶೋಧ ಕಾರ್ಯ
24/10/2022, 16:53

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಬೀರೇಶ್ವರ ಜಾತ್ರಾ ಮಹೋತ್ಸವದ ಆಗಮಿಸಿದ 16 ವರ್ಷದ ಬಾಲಕ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನಾಪತ್ತೆಯಾಗಿದ್ದಾನೆ.
ಬಾಲಕನನ್ನು ಅಥಣಿ ತಾಲೂಕಿನ ಶಿನಾಳ ಗ್ರಾಮದ ಸಿದ್ದು ವಾಗ್ಮೊಡೆ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸ್ಥಾನಕ್ಕೆ ತೆರಳಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರಿಂದ ಮಾಹಿತಿ ದೊರೆತಿದೆ.ಸ್ಥಳೀಯ ನುರಿತ ಈಜುಗಾರರಿಂದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಗ್ರಾಮಸ್ಥರು,ಸ್ಥಳಕ್ಕೆ ಅಥಣಿ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.