ಇತ್ತೀಚಿನ ಸುದ್ದಿ
ಪ್ರತಿಭಾ ಕುಳಾಯಿ ಅವಮಾನ ಪ್ರಕರಣ; ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ: ಮಮತಾ ಗಟ್ಟಿ ಎಚ್ಚರಿಕೆ
24/10/2022, 19:35

ಮಂಗಳೂರು(reporterkarnataka.com): ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಎಚ್ಚರಿಕೆ ನೀಡಿದ್ದಾರೆ.
ಅನಧಿಕೃತ ಟೋಲ್ ಗೇಟ್ ವಿರುದ್ಧ ಆಯೋಜಿಸಿದ್ದ ಹೋರಾಟದಲ್ಲಿ ಪ್ರತಿಭಾ ಕುಳಾಯಿ ಭಾಗವಹಿಸಿದ್ದರು. ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಸುರತ್ಕಲ್ ಟೋಲ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಪ್ರತಿಭಾ ಕುಳಾಯಿ ಅವರನ್ನು ನಾನಾ ರೀತಿಯಲ್ಲಿ ನಿಂದಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ವಿಕೃತರನ್ನು ಕೂಡಲೇ ಬಂಧಿಸಿ ಕಾನೂನಿನ ರುಚಿ ತೋರಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.