2:04 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಭಾರತದ ಅಳಿಯ ಬ್ರಿಟನ್ ನ ಪ್ರಧಾನಿ: ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಪಿಎಂ ಆಗಿ ಆಯ್ಕೆ

24/10/2022, 21:11

ಲಂಡನ್ (reporterkarnataka.com): ಬ್ರಿಟನ್​ ನ ಮುಂದಿನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆಗೊಂಡಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅವರ ಅಳಿಯನಾದ ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳಲ್ಲೇ ರಾಜೀನಾಮೆ ನೀಡಿದ್ದರಿಂದ, ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ನೂತನ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ರಿಷಿ ಸುನಕ್ ಜತೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ನಿಂತಿದ್ದ ಪೆನ್ನಿ ಮೊರ್ಡೌಂಟ್ ಸಂಸದರ ಬೆಂಬಲದ ಬಹುಮತ ಸಿಗದೆ, ರೇಸ್​ನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ರಿಷಿ ಸುನಕ್ 100ಕ್ಕೂ ಹೆಚ್ಚು ಸಂಸದರ ಬೆಂಬಲದೊಂದಿಗೆ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು