2:18 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ

26/10/2022, 21:02

ಮಂಗಳೂರು(reporterkarnataka.com):ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ಸಮಾನ ಮನಸ್ಕರು ಮಂಗಳೂರು ಇದರ ಆಶ್ರಯದಲ್ಲಿ ಬುಧವಾರ ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವ್ರತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.


ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧ ಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ,ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್ ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪ ಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್, ಶಾಹಿರಾ ಮರಿಯಂ, ಶಹನಾಜ್, ಸಾಮಾಜಿಕ ಕಾರ್ಯಕರ್ತರಾದ ಆರೀಫ್,ಸಾಲಿ, ಸಿರಾಜ್, ಸತ್ತಾರ್,ದಿವಾಕರ ಬೋಳೂರು, ಕಾಸಿಂ,ಉದ್ಯಮಿಗಳಾದ ಮುತ್ತಲೀಫ್ ಮುಂತಾದವರು ಹಾಜರಿದ್ದರು.
ಹಾಡುಗಾರ್ತಿ ಮೇಘನಾ ಕುಂದಾಪುರರವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು.ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು