2:08 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಕ್ಟೋಬರ್ 29ರಂದು ಕಾಂಗ್ರೆಸ್ ನಿಂದ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾ

28/10/2022, 20:53

ಉಡುಪಿ(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾವನ್ನು ಅಕ್ಟೋಬರ್ 29 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ತಿಳಿಸಿದರು.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಕ್ ಜಾಥಾವು ಬೈಂದೂರಿನಿಂದ ಆರಂಭಗೊಂಡು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಪಡುಬಿದ್ರಿ ಮೂಲಕ‌ ಕಾರ್ಕಳ ತಾಲೂಕಿನ ಇನ್ನಾಕ್ಕೆ ಆಗಮಿಸಿ, ಅಲ್ಲಿಂದ ಬೆಳ್ಮಣ್ ಮಾರ್ಗವಾಗಿ ಕಾರ್ಕಳಕ್ಕೆ ತಲುಪಲಿದೆ ಎಂದರು.

ಬೈಕ್ ಜಾಥಾದಲ್ಲಿ ಜಿಲ್ಲೆಯ 10 ಬ್ಲಾಕ್ ಗಳಿಂದ ಸುಮಾರು 5 ಸಾವಿರಕ್ಕೂ ಅಧಿಕ ಬೈಕ್‌ಗಳೊಂದಿಗೆ ಯುವಕರು ಭಾಗವಹಿಸಲಿದ್ದಾರೆ. ಕಾರ್ಕಳದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಐಸಿಸಿ ಕಾರ್ಯದರ್ಶಿ ಕೃಷ್ಣ ಅಲ್ಲವಾರ್, ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವ ನಾರಾಯಣ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ರಮಾನಾಥ ರೈ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಸದಾಶಿವ ದೇವಾಡಿಗ, ಪ್ರಭಾಕರ ಬಂಗೇರ, ಸೌರಭ್ ಬಲ್ಲಾಳ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು