7:04 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದ ಅಲೆಗಳ ನಿನಾದ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ 50 ಬೋಟ್ ಗಳಲ್ಲಿ ಮೊಳಗಿದ ಕೋಟಿ ಕಂಠ ಗಾಯನ

29/10/2022, 10:44

ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿ ಸಮುದ್ರದ ಅಲೆಗಳ ನಿನಾದದಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಕಡಲಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿ ಬಂತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಈ ಕೋಟಿ ಕಂಠ ಗಾಯನ ಮೂಡಿ ಬಂತು.‌ ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲುವರೆಗೆ 8ಕಿ.ಮೀ. ಸಾಗುವ ಮೂಲಕ‌ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿ ಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳ ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ಸಮುದ್ರ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.


ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.
ದೋಣಿಗಳ ಮೂಲಕ ಸಾಗಿ ಸಮದ್ರದ ನಡುವೆ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಹಾಡಲಾಯಿತು. ಕನ್ನಡ ಧ್ವಜಗಳೊಂದಿಗೆ ತುಳು ಧ್ವಜವನ್ನೂ ಹಾರಿಸಲಾಗಿದ್ದು ಜೊತೆಗೆ ಕನ್ನಡ ಹಾಡುಗಳ ನಂತರ ತುಳು ಹಾಡನ್ನು ಕೂಡ ಹಾಡುವ ಮೂಲಕ ಒಕ್ಕೂಟ ವ್ಯವಸ್ಥೆಯ ತತ್ವವನ್ನು ಸಾರಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಆಸಕ್ತರು ಸೇರಿದಂತೆ 500 ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಅಲ್ಲದೆ ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ‌ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ‌ ನೆರವೇರಿತು‌.‌

ಇತ್ತೀಚಿನ ಸುದ್ದಿ

ಜಾಹೀರಾತು