ಇತ್ತೀಚಿನ ಸುದ್ದಿ
ಕೋಟತಟ್ಟು: ಮೀನುಗಾರ ಯುವಕ ನೇಣಿಗೆ ಶರಣು; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ
30/10/2022, 11:46
ಬ್ರಹ್ಮಾವರ(reporterkarnataka.com):ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕೆರೆಯ ಸಂತೋಷ ಕುಂದರ್(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿಯೊಂದಿಗೆ ವಾಸವಾಗಿದ್ದ ಇವರು, ಮೀನುಗಾರಿಕೆ ಕೆಲಸಕ್ಕೆ ಹೋಗುತ್ತಿದ್ದರು. ದೀಪಾವಳಿ ಹಬ್ಬದ ರಜೆಗೆ ಬಂದವರು, ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು. ಕೆಲವು ದಿನಗಳಿಂದ ತಾಯಿಯು ತನ್ನ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಒಬ್ಬನೇ ಇದ್ದ ಸಂತೋಷ್ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪಕ್ಕದ ಮನೆಯವರು ತಿಂಡಿ ತಿನ್ನಲು ಕರೆಯಲು ಬಂದಾಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














