ಇತ್ತೀಚಿನ ಸುದ್ದಿ
ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ
02/11/2022, 12:32

ಬಂಟ್ವಾಳ(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.
ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ ಅವರು ಕನ್ನಡದ ಶಾಲು ಮತ್ತು ಗುಲಾಬಿ ನೀಡುವ ಮೂಲಕ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು.
ಶಾಲಾ ವಿದ್ಯಾರ್ಥಿಗಳಾದ ಅಮೀನತ್ ಅಫೀಜಾ ಮತ್ತು ಯಶಸ್ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.
ಹಿಂದಿ ಭಾಷಾ ಶಿಕ್ಷಕಿ ಪುಷ್ಪ ಅವರು ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು ಎಂಬ ಕಿವಿ ಮಾತನ್ನು ತಿಳಿಸಿದರು.
ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಶಾಲಾ ವಿದ್ಯಾರ್ಥಿನಿಯರು ಕನ್ನಡ ನಾಡನ್ನು ವರ್ಣಿಸುವ ನೃತ್ಯವನ್ನು ಮಾಡಿ ಮನರಂಜಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಶಿಕ್ಷಕರಾದ ಪ್ರಭಾಕರ್, ಸಂತೋಷ್ ಕೆ ಪಮ್ಮಾರ್ ,ಮಾಲಿನಿ ,ವಿನೀತ ಉಪಸ್ಥಿತರಿದ್ದರು.
ಜೈನಬ ಹಪ್ನ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಮೇಘ ನಿರ್ವಹಿಸಿದರು.