8:41 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್

04/11/2022, 00:47

ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು.
ನಗರದ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ ಶುರುವಾದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಅದ್ಧೂರಿಯಾಗಿ ನಡೆಯಿತು. ಸಮಾವೇಶದ ಎರಡನೇ ದಿನದಂದು (ನವೆಂಬರ್ 3,2022)ಆಯೋಜಿಸಲಾದ “ADVANCING GENDER DIVERSITY: JOURNEY POST SHATTERING THE GLASS CEILING” ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


‘ಜಾಗತಿಕ ಹೂಡಿಕೆದಾರರ ಸಮಾವೇಶ – 2022ʼರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ʼಮಹಿಳಾ ಉದ್ದಿಮೆದಾರರು ಹಾಗೂ ಹಾಗೂ ಬೇರೆ ಬೇರೆ ವೃತ್ತಿಗಳಲ್ಲಿ ನಿರತವಾಗಿರುವ ಮಹಿಳೆಯರಿಗೆ ನಿರಂತರವಾಗಿ ಬೆಂಬಲ ಸಿಗುತ್ತಿದೆ. ಆದರೆ ಮಹಿಳಾ ನೇತೃತ್ವದ ಉದ್ಯಮಗಳ ಉಳಿವಿಗಾಗಿ ಬಂಡವಾಳ ಹಾಗೂ ಮಾರುಕಟ್ಟೆ ಒದಗಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ. ಮಹಿಳೆಯರನ್ನು ಅನೌಪಚಾರಿಕ ವಲಯದಿಂದ ಹೊರತರಲು ಹಾಗೂ ಸುಸ್ಥಿರವಾದ ಮಹಿಳಾ ಕೇಂದ್ರಿತ MSME ವಲಯವನ್ನು ನಿರ್ಮಾಣ ಮಾಡುವ ದೃಷ್ಟಿಯಿಂದ ಆಧುನಿಕ ವಲಯಗಳಲ್ಲಿ ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಅಗತ್ಯವಿದೆ. ಈಗಾಗಲೇ ತಮ್ಮ ಸಾಧನೆಯ ಮೂಲಕ ಕರ್ನಾಟಕ ಹಾಗೂ ದೇಶಕ್ಕೆ ಹೆಮ್ಮೆ ತಂದ ಎಲ್ಲ ಮಹಿಳಾ ಸಾಧಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಅವರು ಹೇಳಿದರು.
ಮೂರು ದಿನಗಳ ಅವಧಿಯ ಈ ಸಮಾವೇಶದಲ್ಲಿ ರಾಷ್ಟ್ರ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕೈಗಾರಿಕೋದ್ಯಮಿಗಳು, ಜಾಗತಿಕ ಮಟ್ಟದ ಭಾಷಣಕಾರರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕೈಗಾರಿಕಾ ಹಾಗೂ ವ್ಯಾಪಾರ ಸಂಘ ಸಂಸ್ಥೆಗಳು ಭಾಗವಹಿಸಿವೆ. ಹಾಗೇ ಸಮಾವೇಶದಲ್ಲಿ ಹಲವಾರು ಪ್ರಚಲಿತ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು