ಇತ್ತೀಚಿನ ಸುದ್ದಿ
ಆನ್ ಲೈನ್ ಎಡವಟ್ಟು: ಟಿಇಟಿ ಪರೀಕ್ಷೆಯಿಂದ ವಂಚಿತರಾದ ಹೊರ ಜಿಲ್ಲೆಯ ಅಭ್ಯರ್ಥಿಗಳು
06/11/2022, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಆನ್ ಲೈನ್ ಎಡವಟ್ಟುನಿಂದ ವಿದ್ಯಾರ್ಥಿಗಳು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ನಗರದ ಹಲವು ಸೆಂಟರ್ ಗಳಲ್ಲಿ ಟಿಇಟಿ ಪರೀಕ್ಷೆ ನಡೆದಿದೆ.
ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಸೆಂಟರ್ ತೋರಿಸಿದ ಅರ್ಜಿ ಸಲ್ಲಿಸಲಾಗಿದೆ. ಆದರೆ ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ನಿರಾಕರಿಸಲಾಗಿದೆ. ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಅಳಲು ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳು ಪರೀಕ್ಷೆ ಬರೆಯದೇ ವಂಚಿತರಾಗಿದ್ದಾರೆ.