3:20 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು