ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ: ಲಾಕ್ ಡೌನ್ ಸಂಜೆ 5ರ ತನಕ ಸಡಿಲಿಕೆ
01/07/2021, 19:35
ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ.
ಇಂದಿನ ವರೆಗೆ ಮಧ್ಯಾಹ್ನ 2ರ ತನಕ ಮಾತ್ರ ಸಡಿಲಿಕೆ ನೀಡಲಾಗಿತ್ತು. ಬಸ್ ಸಂಚಾರವನ್ನು ಮಧ್ಯಾಹ್ನ 1.30ರ ಬಳಿಕ ನಿಲ್ಲಿಸಲಾಗಿತ್ತು. ಆದರೆ ನಾಳೆಯಿಂದ ಸಂಜೆ 5ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ವೀಕೆಂಡ್ ಕರ್ಫ್ಯೂ ಮುಂದುವರಿಯುತ್ತದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಧ್ಯಾಹ್ನ 2ರ ವರೆಗೆ ಹಾಲು, ಮೆಡಿಕಲ್, ದಿನಸಿ, ತರಕಾರಿ, ಹಣ್ಣು ಹಂಪಲು, ಮೀನು – ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.