6:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು