10:41 PM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಹೆಜಮಾಡಿ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು 79 ಸಾವಿರ ರೂ. ನಗದು ಕಳವು

11/11/2022, 17:20

ಉಡುಪಿ(reporterkarnataka.com): ಹೆಜಮಾಡಿ ಗ್ರಾಮದ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 79,020 ರೂ. ನಗದು ಕಳವು ಮಾಡಿದ್ದಾರೆ.
ನ. 9ರಂದು ಘಟನೆ ಬೆಳಕಿಗೆ ಬಂದಿದೆ. ನ.8ರ ಸಂಜೆ 4.30ರಿಂದ ನ.9ರ ಬೆಳಿಗ್ಗೆ 7ಗಂಟೆಯ ಮಧ್ಯಾವಧಿಯಲ್ಲಿ ಶಾಲಾ ಕಛೇರಿಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಶಾಲಾ ಕುರ್ಚಿ  ಖರೀದಿಗೆಂದು ಇರಿಸಿದ್ದ 45 ಸಾವಿರ ರೂ., ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆಂದು ಸಂಗ್ರಹಿಸಿದ 11 ಸಾವಿರ ರೂ. ಮತ್ತು ಶಾಲಾ ಶುಲ್ಕದ ಬಾಬ್ತು ನಗದು 20,020 ರೂ. ಸೇರಿದಂತೆ ಒಟ್ಟು ರೂಪಾಯಿ 79,020/-  ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು