5:45 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದಿಂದ ರಾಟ್ ಫೆಸ್ಟ್

11/11/2022, 20:49

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದ ವತಿಯಿಂದ ROT (ರಾಟ್) ಫೆಸ್ಟ್ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆನರಾ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವವನ್ನು ಬೆಳೆಸಬಹುದು ಹಾಗೂ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಬಾಗವಹಿಸುವುದರಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಬೆಳೆಯಲು ಸಹಕಾರವಾಗುತ್ತದೆ ಎಂದರು.
ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲೇಜಿನ ಹೆಸರನ್ನು ಸಮಾಜಕ್ಕೆ ಎತ್ತಿ ತೋರಿಸಬೇಕು ಎಂದರು.

ಅಧ್ಯಕ್ಷೀಯ ಭಾಷಣವನ್ನು ಪ್ರಾಂಶುಪಾಲೆ ಡಾ. ಪ್ರೇಮಲತಾ. ವಿ. ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮುಂದಕ್ಕೆ ಅಂತರ್ ಕಾಲೇಜು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಹಕಾರಿಯಾಗುತ್ತದೆ ಎಂದರು.


ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥೆ ದೇಜಮ್ಮ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಅನ್ವೇಷಣೆ ಬಂದಲ್ಲಿ ಮಾತ್ರ ಅದೊಂದು ಪ್ರಯೋಜನಕಾರಿ ಫಲ ನೀಡಲು ಸಾಧ್ಯ ಎಂದರು.
ಕಾರ್ಯಕ್ರಮದ ಸಂಯೋಜಕರಾದ ಉಷಾ ನಾಯಕ್ ಹಾಗೂ ಆಶಾಲತಾ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ನರಸಿಂಹ ಭಟ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ತೃಪ್ತಿ ವ್ಯಾಸ್ ರಾಟ್ ಬಗ್ಗೆ ತಿಳಿಸಿದರು. ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸ್ಪಂದನಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು