3:32 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ

14/11/2022, 22:04

ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.

ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ. ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು